ಈ ಬಾರಿ ಶೈಕ್ಷಣಿಕ ವರ್ಷ ಮೇ 16 ರಿಂದ ಪ್ರಾರಂಭ
ಬೆಂಗಳೂರು: ಈ ಬಾರಿ ಶಾಲೆಗಳು ಬೇಗನೆ ಪ್ರಾರಂಭವಾಗುತ್ತಿದ್ದು, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ16 ರಿಂದ ಪ್ರಾರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇರಿಕೆ ವರ್ಷ” ಎಂದು ಸಂಕಲ್ಪ ಮಾಡಲಕಾಗಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನಗಳನ್ನು ನೀಡಲಾಗಿದೆ. ಮೇ 16 ರಿಂದ ಜೂನ್ 15 ರಚವರೆಗೆ ಒಂದು ತಿಂಗಳ ಅವಧಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಇನ್ನೂ ಶಿಕ್ಷಣ ಇಲಾಖೆ ಶಾಲೆಗಳಿಗೆ ಕೆಲವೊಂದು ಸಚನೆಗಳನ್ನು ನೀಡಿದ್ದು, ಮೇ 16ರಿಂದಲ್ಲೇ ಮಕ್ಕಳ ದಾಖಲಾತಿ ಆರಂಭಿಸಿ, ಜುಲೈ 31ರೊಳಗೆ ಮುಗಿಸಬೇಕು. ಮೇ 16ರಿಂದ 20ರವರೆಗೆ ದಾಖಲಾತಿ ಆಂದೋಲನ ನಡೆಸಬೇಕು. ಮೇ14 ರಿಂದ ತರಗತಿ ಆರಂಭಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಜೂನ್ 1ರಿಂದ ಕಲಿಕಾ ಚೇತನ ಕಾರ್ಯಕ್ರಮದಡಿಪಠ್ಯ ಬೋಧನೆ ನಡೆಸಬೇಕು ಎಂದು ಇಲಾಖೆ ತಿಳಿಸಿದೆ.
https://twitter.com/BCNagesh_bjp?ref_src=twsrc%5Etfw%7Ctwcamp%5Etweetembed%7Ctwterm%5E1519145327923630080%7Ctwgr%5E%7Ctwcon%5Es1_&ref_url=https%3A%2F%2Ftv9kannada.com%2Feducation%2Fgovt-instructs-schools-to-start-from-may-16-parents-angry-over-education-departments-decision-dmg-375301.html
ಕೆಳೆದ ಮೂರು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಅವಲೋಕಿಸಿದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳಲಾಗಿದ್ದು, ಶೈಕ್ಷಣಿಕ ವರ್ಷ ಬೇಗನೆ ಆರಂಭಿಸಿದರೆ ಕಲಿಸಲು ಹೆಚ್ಚು ಸಮಯ ಸಿಗುತ್ತದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 3 ವರ್ಷಗಳಲ್ಲಿ ಶೇ50-60 ರಷ್ಟು ಮಾತ್ರ ಭೌತಿಕ ಕಲಿಕೆಯಾಗಿದ್ದು, 2019-20, 2020-21,2021-22ನೇ ಸಾಲಿನಲ್ಲಿ ಕಲೆಕೆಗೆ ಧಕ್ಕೆಯಾಗಿದೆ. ಮಕ್ಕಳಿಗೆ ಪೂರ್ಣ ಪ್ರಮಾಣದ ಕಲಿಕೆ ಆಗಿಲ್ಲ.