ಫೆಬ್ರವರಿಯಿಂದ ಬೆಂಗ್ಳೂರಲ್ಲಿ ಶಾಲೆಗಳು ಓಪನ್..!!
ಮಡಿಕೇರಿ : ಕೊರೊನಾ ಸೋಂಕು ಕಡಿಮೆಯಾಗಲಿ ಅಥವಾ ಜಾಸ್ತಿಯಾಗಲಿ ಫೆಬ್ರವರಿ ಮೊದಲ ವಾರದಿಂದಲೇ ಬೆಂಗಳೂರಿನಲ್ಲಿ ಶಾಲೆಗಳು ಆರಂಭವಾಗುತ್ತವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ವಾರದ ಕೋವಿಡ್ ಸಂಬಂಧ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು.
ಈಗಾಗಲೇ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಓಪನ್ ಮಾಡುವ ಸಾಧ್ಯತೆಗಳು ಜಾಸ್ತಿ ಇದೆ ಎಂದಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರನಲ್ಲಿ ಕೊರೊನಾ ಸೋಂಕು ಹೆಚ್ಚಾದ ಕಾರಣ ಶಾಲಾ – ಕಾಲೇಜುಗಳಿಗೆ ರಜೆ ನೀಡಿ, ಆನ್ ಲೈನ್ ಕ್ಲಾಸ್ ಗಳಿಗೆ ಆಧ್ಯತೆ ನೀಡಲಾಗಿದೆ.
ಸದ್ಯ ಬೆಂಗಳೂರಿನಲ್ಲಿ ಕೊರೊನಾ ಕಡಿಮೆಯಾಗದಿದ್ದರೂ, ಶಾಲೆ – ಕಾಲೇಜು ಮತ್ತೆ ಓಪನ್ ಮಾಡಬೇಕು ಅನ್ನೋವ ಮಾತುಗಳು ಕೇಳಿಬರುತ್ತಿವೆ.








