ಮಾಜಿ ವಿಜ್ಞಾನಿ, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ವಿಧಿವಶ : ದೇಹದಾನಕ್ಕೆ ಕುಟುಂಬಸ್ಥರ ನಿರ್ಧಾರ
ಬೆಂಗಳೂರು : ಡಿಆರ್ಡಿಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಅವರು ತಮ್ಮ 61 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಸುಧೀಂದ್ರ ಹಾಲ್ದೊಡ್ಡೇರಿ ಸುಪ್ರಸಿದ್ಧ ವಿಜ್ಞಾನ ಬರಹಗಾರರಾಗಿದ್ದರು, ಡಿಆರ್ಡಿಒದ ಮಾಜಿ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್ ಆಗಿರುವ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರಿಗೆ ಏಳು ದಿನಗಳ ಹಿಂದೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಈ ಮಧ್ಯೆ ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿತ್ತು.
ಅವರಿಗೆ ಹೃದಯಾಘಾತ ಸಂಭವಿಸಿದ ಬಳಿಕ ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿತ್ತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗದಾನ ಮಾಡಲಾಗುತ್ತದೆ.
sudhindra halkodderi passed away