ಆಚಾರ್ಯ, ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ. ಕೊರಟಾಲ ಶಿವ ನಿರ್ದೇಶನ ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭವಾಗಿದ್ದು, ಕೆಲ ಪ್ರಮುಖ ಭಾಗಗಳ ಚಿತ್ರೀಕರಣ ಮುಗಿದಿದೆ.
ವಿಶೇಷ ಅಂದರೆ ಆಚಾರ್ಯ ಸಿನಿಮಾದಲ್ಲಿ ಚಿರಂಜೀವಿ ಪುತ್ರ ರಾಮ್ ಚರಣ್ ಅಥಿತಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಇದೀಗ ಚರಣ್ ಪಾತ್ರಕ್ಕೆ ಕತ್ತರಿ ಹಾಕಲಾಗಿದೆ ಎಂದು ಟಾಲಿವುಡ್ ಮೂಲಗಳು ತಿಳಿಸಿವೆ.
ಲಾಕ್ ಡೌನ್ ಸಮಯದಲ್ಲಿ ನಿರ್ದೇಶಕ ಕೊರಟಾಲ ಶಿವ ತಮ್ಮ ಕಥೆಯಲ್ಲಿ ಕೊಂಚ ಬದಲಾವಣೆಗಳನ್ನು ಮಾಡಿಕೊಂಡಿದ್ದು, ಚರಣ್ ಪಾತ್ರಕ್ಕೆ ಕತ್ತರಿ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. 
ಇನ್ನು ಸದ್ಯ ರಾಮ್ ಚರಣ್ ಎಸ್.ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಆಗಿದೆ.








