ರಸ್ತೆ ಮಧ್ಯೆ ಸ್ಕೂಟರ್ ಗೆ ಹೊತ್ತಿಕೊಂಡ ಬೆಂಕಿ – ಸವಾರ ಸಾವು..
ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿ ಬಿದ್ದ ಆಕ್ಟೀವ್ ಹೋಂಡಾ ಸ್ಕೂಟರ್ ಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸ್ಕೂಟರ್ ನಲ್ಲಿ ತೆರಳುತ್ತಿದ್ದ ಇಬ್ಬರಲ್ಲಿ ಒಬ್ಬ ವ್ಯಕ್ತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ಘಟನೆ ನಡೆದಿದೆ. ರಸ್ತೆ ಮಧ್ಯೆ ಏಕಾಏಕಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ವಾಹನ ಸವಾರರು ಪಾರಾಗಲು ಸಾಧ್ಯವಾಗಲಿಲ್ಲ. ವಾಹನ ಸವಾರರಿಗೂ ಬೆಂಕಿ ತಗುಲಿತ್ತು. ಸ್ಥಳೀಯರು ವಾಹನ ಸವಾರರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದರು.
ಅಫಘಾತಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವರಾಮಯ್ಯ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸವಾರ ಅನಂತರಾಮಯ್ಯಗೆ ಕಾಲಿಗೆ ಏಟಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.