ಎಸ್ ಡಿಎಂ ಕಾಲೇಜಿನ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (SDM) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ.ಬಿ.ಯಶೋವರ್ಮಾ ಅವರು ವಿಧಿವಶರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋವರ್ಮಾ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿಳೆದಿದ್ದಾರೆ.
ಡಾ.ಬಿ.ಯಶೋವರ್ಮ ಅವರು ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.