ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕೇಂದ್ರದ ಹೊರಗಡೆ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಎಸ್ಡಿಪಿಐ ಸಂಘಟನೆಯ 10ರಿಂದ 15 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಡಿಎಂ ಪಿಯು ಕಾಲೇಜಿನಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ನಡೆಯುತ್ತಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಸೇರಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳು, ಪಕ್ಷದ ಪರ ಘೋಷಣೆಗಳನ್ನು ಕೂಗುತ್ತಿದ್ದರು.
ಬಿಜೆಪಿ ಕಾರ್ಯಕರ್ತರು ತಮ್ಮ ಬೆಂಬಲಿತ ಅಭ್ಯರ್ಥಿಗಳು ಹಾಗೂ ಪಕ್ಷದ ಪರ ಘೋಷಣೆ ಕೂಗೂತ್ತಾ, ಬಾವುಟ ಹಾರಿಸಿ ವಿಜಯೋತ್ಸವದಲ್ಲಿ ತೊಡಗಿದ್ದರು. ಈ ವೇಳೆ ಬಿಜೆಪಿ ಹಾಗೂ ಎಸ್ಡಿಪಿಐ ಪಕ್ಷದ ಕಾರ್ಯಕರ್ತರ ಘೋಷಣೆಗಳು ತಾರಕಕ್ಕೇರಿತ್ತು. ಈ ಸಂದರ್ಭದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಜಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಕೂಡಲೇ ಮಧ್ಯಪ್ರವೇಸಿರುವ ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಮತ ಎಣಿಕೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ಡಿಪಿಐ ಸಂಘಟಣೆಯ ಸುಮಾರು 10-15 ಬೆಂಬಲಿಗರ ವಿರುದ್ದ ಅ.ಕ್ರ 99/20 ಕಲಂ 143, 124ಎ, ಆರ್/ಡಬ್ಲೂ 149 ಅಡಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








