ಮಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಉನ್ಮಾದದಲ್ಲಿ ಎಸ್ಡಿಪಿಐ ಕಾರ್ಯಕರ್ತರು ರಾಷ್ಟ್ರ ವಿರೋಧಿ ವರ್ತನೆ ತೋರಿಸಿದ್ದಾರೆ. ದೇಶ ವಿರೋಧಿ ಕೃತ್ಯದ ಬಗ್ಗೆ ಚುನಾವಣಾ ಆಯೋಗ ಗಮನಿಸುತ್ತಿದೆ. ಎಸ್ಡಿಪಿಐ ಕಾರ್ಯಕರ್ತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಟೀಲ್, ಎಸ್ಡಿಪಿಐ ಭಯೋತ್ಪಾದನಾ ಸಂಸ್ಥೆ ಅಲ್ಲ ಅಂತಾ ತಿಳಿದುಕೊಂಡಿದ್ದೆವು. ಆದರೆ ಈಗ ಭಯೋತ್ಪಾದನೆಗೆ ಪೂರಕವಾಗಿ ವರ್ತಿಸುತ್ತಿದೆ. ಎಸ್ಡಿಪಿಐ ನಡೆ ರಾಷ್ಟವಿರೋಧಿ ಕೃತ್ಯಕ್ಕೆ ಪೂರಕವಾಗಿದೆ. ಭಾರತ್ ಮಾತಕೀ ಜೈ ಘೋಷಣೆ ಕೂಗಬೇಕಿತ್ತು, ಆದರೆ ನಮ್ಮ ಶತ್ರು ರಾಷ್ಟ್ರದ ಪರ ಘೋಷಣೆ ಕೂಗಿದ್ದಾರೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಎಸ್.ಡಿಪಿಐ ಈ ತರಹವೇ ದೇಶವಿರೋಧಿ ಕೃತ್ಯದಲ್ಲಿ ತೊಡಗಿಸಿಕೊಂಡಿದೆ. ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆ, ಸಿಎಎ ಗಲಭೆ, ಕೊಲೆ ಪ್ರಕರಣದಲ್ಲಿ ಎಸ್ಡಿಪಿಐ ಪಾತ್ರ ಇದೆ. ಯಾರದ್ದೋ ಬಂಧನ ಆದಾಗ ಕಚೇರಿ ಮುತ್ತಿಗೆ ಮಾಡುತ್ತಾರೆ. ಗಲಭೆ ಸೃಷ್ಟಿ ಮಾಡಲು ಯತ್ನ ಮಾಡುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಎರಡು ನಾಲಗೆ
ಕಾಂಗ್ರೆಸ್ ನಾಯಕರಿಗೆ ಎರಡು ನಾಲಗೆ ಇದೆ, ಗಲಭೆ ಆದಾಗ ಎಸ್ಡಿಪಿಐ ಜೊತೆ ಸಂಬಂಧ ಇಲ್ಲ ಅಂತಾ ಹೇಳುತ್ತಾರೆ. ಬಂಟ್ವಾಳ ನಗರ ಸಭೆ, ಕೆಲ ಗ್ರಾಮ ಪಂಚಾಯತ್ ನಲ್ಲಿ ಎಸ್ಡಿಪಿಐ ಜೊತೆ ಮೈತ್ರಿ ಮಾಡಿದೆ. ಬೆಳಗ್ಗೆ ವಿರೋಧ ಮಾಡಿ ರಾತ್ರಿ ಎಸ್ಡಿಪಿಐ ಜೊತೆ ಸಭೆ ಮಾಡುತ್ತಾರೆ. ಕಾಂಗ್ರೆಸ್ ಧೈರ್ಯವಿದ್ದರೆ ನೇರವಾಗಿ ಹೇಳಲಿ. ಎಸ್ಡಿಪಿಐ ಜೊತೆ ಇದ್ದಾರಾ ಇಲ್ವಾ ಅಂತಾ ಹೇಳಲಿ. ನಿಮ್ಮ ದ್ವಂದ್ವ ನಿರ್ಧಾರದಿಂದ ಜನ ಕೈ ಬಿಡುತ್ತಿದ್ದಾರೆ. ಅಲ್ಪಸಂಖ್ಯಾತರೇ ಕಾಂಗ್ರೆಸ್ ಕೈಬಿಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯದಲ್ಲಿ ಸರ್ವವ್ಯಾಪಿಯಾಗಿ ವಿಸ್ತರಿಸಿದೆ
ಗ್ರಾಮ ಪಂಚಾಯತ್ ಚುನಾವಣೆ ಬಿಜೆಪಿ ಪಾಲಿಗೆ ಯಶಸ್ಸಿನ ಚುನಾವಣೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಜಯ ಪಡೆದಿದ್ದಾರೆ. ಚುನಾವಣೆಗೆ ನಿಂತ ಕಾರ್ಯಕರ್ತರಿಗೆ ಬಿಜೆಪಿ ಬೆಂಬಲ ನೀಡಿದೆ. 55% ಕ್ಕಿಂತ ಹೆಚ್ಚು ಕಾರ್ಯಕರ್ತರು ಜಯಗಳಿಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಖುಷಿ ವ್ಯಕ್ತಪಡಿಸಿದ್ದಾರೆ.
29,478 ಬಿಜೆಪಿ ಬೆಂಬಲಿತರು ಅಭ್ಯರ್ಥಿಗಳು ಜಯಗಳಿಸಿದ್ದಾರೆ, 24,000 ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ. 18,825 ಜೆಡಿಎಸ್ ಬೆಂಬಲಿತರು ಜಯಗಳಿಸಿದ್ದರೆ, 9,753 ಇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಸರ್ವವ್ಯಾಪಿಯಾಗಿ ವಿಸ್ತರಿಸಿದೆ. ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಮನ್ನಣೆ ಸಿಕ್ಕಿದೆ ಎಂದು ಹೇಳಿದರು.
ಕಾಂಗ್ರೆಸ್ ನ ಗೂಂಡಾಗಿರಿ ಪೃವೃತ್ತಿ, ಕುಂತತ್ರ ರಾಜಕಾರಣವನ್ನು ತಿರಸ್ಕಾರ ಮಾಡಿದ್ದಾರೆ. ಕೆಲವು ಕಡೆ ಕಾಂಗ್ರೆಸ್ ನ್ನು ತಿರಸ್ಕಾರ ಮಾಡಿ ಎಸ್ಡಿಪಿಐಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ನ ಸಾಂಪ್ರದಾಯಿಕ ಮತಗಳೂ ಕೈ ಬಿಟ್ಟಿದೆ. ಕಾಂಗ್ರೆಸ್ ಠೇವಣಿ ಉಳಿಸಿಕೊಳ್ಳಲೂ ಪರದಾಡಿದೆ. ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಜನರನ್ನು ಹುಯಿಲೆಬ್ಬಿಸುವ ಯತ್ನ ಮಾಡಿದೆ. ಆದರೆ ಫಲಿತಾಂಶ ಎಲ್ಲವುದಕ್ಕೂ ಉತ್ತರ ನೀಡಿದೆ. ಮೋದಿಯ ಕೃಷಿ ಕಾಯ್ದೆಗೆ ಜನ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕೃಷಿ ಪ್ರಧಾನವಾಗಿರುವ ಪ್ರದೇಶಗಳಲ್ಲಿ ಬಿಜೆಪಿ ಜಯಗಳಿಸಿದೆ ಎಂದು ಕಟೀಲ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel