ಹರಿಯಾಣ ವಿಧಾನಸಭೆ ಚುನಾವಣೆಗೆ ಆಪ್ ಹಾಗೂ ಕಾಂಗ್ರೆಸ್ ಮಧ್ಯೆ ಟಿಕೆಟ್ ಹಂಚಿಕೆಯ ಜಟಾಪಟಿ ಶುರುವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ 0 ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಗೆ ಒತ್ತಾಯಿಸುತ್ತಿದೆ. ಆದರೆ, 7 ಸ್ಥಾನಗಳನ್ನು ನೀಡಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಎರಡೂ ಪಕ್ಷಗಳ ಮಧ್ಯೆ ಜಟಾಪಟಿ ಶುರುವಾಗಿದೆ.
ಹರಿಯಾಣದ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಪೈಕಿ 7 ಕ್ಷೇತ್ರಗಳನ್ನು ಬಿಟ್ಟು ಕೊಟ್ಟು ಇನ್ನುಳಿದ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಎರಡೂ ಪಕ್ಷಗಳ ಮಧ್ಯೆ ಸೀಟು ಹಂಚಿಕೆಯ ಜಟಾಪಟಿ ಶುರುವಾಗಿದೆ. ಈಗಾಗಲೇ 66 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.
ಎಎಪಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಹಿಂದೆ ಕಾಂಗ್ರೆಸ್ ಹಾಗೂ ಆಪ್ ಹರಿಯಾಣ ಹಾಗೂ ಗುಜರಾತ್ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹೊಂದಾಣಿಕೆಯಾಗಿದ್ದವು.
ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದವು. ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.
ಹರಿಯಾಣದಲ್ಲಿ 2019 ರ ಚುನಾವಣೆಯಲ್ಲಿ 40 ಸ್ಥಾನ ಗೆದ್ದಿದ್ದ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿತ್ತು. ಜೆಜೆಪಿ 10 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿತ್ತು.