Second PU Exam : PUC ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ – KSRTC
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ KSRTC ಸಿಹಿ ಸುದ್ದಿ ನೀಡಿದೆ, ಪರೀಕ್ಷೆ ಬರೆಯಲು ತೆರಳುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಮುಗಿಯುವವೆಗೂ ಉಚಿತವಾಗಿ ಪ್ರಯಾಣಿಸುಬಹುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ದ್ವಿತಿಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದಾಗಿದೆ. ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಬಸ್ ಚಾಲಕರಿಗೆ ಸಾರಿಗೆ ನಿಗಮ ಸೂಚಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್ಆರ್ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.
Second PU Exam : Free bus travel for PUC students – KSRTC