ದ್ವಿತೀಯ ಪಿಯುಸಿ ಪರೀಕ್ಷೆ | ಜೀವಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ಯಶಸ್ವಿ
ಬೆಂಗಳೂರು: ಸುದೀರ್ಘ ರಜೆಯ ಬಳಿಕ ಇಂದು ಜೀವಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ಪರೀಕ್ಷೆಗಳು ಸುಭೀಕ್ಷವಾಗಿ ನಡೆದಿವೆ.
ರಾಜ್ಯಾದ್ಯಂತ ಏ. 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹೊಸಬರು, ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಒಟ್ಟು ಜೀವಶಾಸ್ತ್ರ ಪರೀಕ್ಷೆಗೆ 1,72,398 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರಲ್ಲಿ 1,68,004 ವಿದ್ಯಾರ್ಥಿಗಳು ಹಾಜರಾಗಿದ್ದರೇ, 4,394 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಹಾಗೇ ಭೂಗೋಳಶಾಸ್ತ್ರ ಪರೀಕ್ಷೆಗೆ 40,264 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 37,585 ವಿದ್ಯಾರ್ಥಿಗಳು ಹಾಜರಾಗಿ, 2,679 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಇನ್ನೂ ಪರೀಕ್ಷಾ ಅಕ್ರಮ, ಅವ್ಯವಹಾರದಲ್ಲಿ ಯಾರು ಭಾಗಿಯಾಗಿಲ್ಲ. ಯಾವುದೇ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ. ಹಾಗೆ ಯಾವುದೇ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.