ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ Saaksha Tv
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇಲಾಖೆಯು ದಿನಾಂಕ 16-04-2022 ರಿಂದ 06-05-2022 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಅಲ್ಲದೇ ಇಲಾಖೆಯೂ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 17-02-2022 ರಂದು ಆರಂಭಿಸಿ 25-03-2022 ರವರೆಗೆ ನಡೆಸಲು ದಿನಾಂಕ ನಿಗದಿಪಡಿಸಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14 ರಿಂದ 25, 2022 ರವರೆಗೆ ನಡೆಸಲಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ್ದು ಅದರ ವಿವರಗಳನ್ನು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ.