Second PUC : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಪರೀಕ್ಷೆ ಫಲಿತಾಂಶ ದಿನಾಂಕ ತಿಳಿಸಿದ ಶಿಕ್ಷಣ ಸಚಿವರು
1109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ
ಮಾರ್ಚ್ 09 ರಿಂದ ಆರಂಭ
ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ
ಮಾರ್ಚ್ 9 ರಿಂದ ರಾಜ್ಯದಲ್ಲಿ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಪಳಿತಾಂಶ ಪ್ರಕಟವಾಗುವುದು ಯಾವಾಗ ಎಂದು ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರು ಮಾಧ್ಯಮದವರ ಮುಂದೆ ಹೇಳಿದ್ದಾರೆ..
1109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 09 ರಿಂದ ಆರಂಭವಾಗಿದೆ. ಈ ಪರೀಕ್ಷೆಗೆ 7,26,195 ವಿದ್ಯಾರ್ಥಿಗಳು ರಿಜಿಸ್ಟ್ರೇಷನ್ ಪಡೆದಿದ್ದಾರೆ.
ಕರ್ನಾಟಕದ ಎಲ್ಲ ಭಾಗಗಳಲ್ಲೂ ಪೊಲೀಸ್ ಬಿಗಿ ಬಂದೋಬಸ್ತ್ ಜತೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಈ ಪರೀಕ್ಷೆಯ ಫಲಿತಾಂಶವನ್ನು ಮೇ ಮೊದಲವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಮೊದಲ ದಿನದ ಪರೀಕ್ಷೆಗೆ 23,771 ಅಭ್ಯರ್ಥಿಗಳು ಗೈರಾಗಿದ್ದಾರೆ. ನಕಲು ಮಾಡಲು ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಮೊದಲ ದಿನದಂದು ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳಿದ್ದವು. ಈ ಪರೀಕ್ಷೆಗೆ ಒಟ್ಟು 5,33,797 ವಿದ್ಯಾರ್ಥಿಗಳು ರಿಜಿಸ್ಟ್ರೇಷನ್ ಪಡೆದಿದ್ದರು.
Second PUC : Important information for Second PUC students