ಬೆಂಗಳೂರು : ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ.. ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರೇ ವಹಿಸಬೇಕಾಗುತ್ತದೆ.
‘ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದು ಸಿದ್ದರಾಮಯ್ಯ ದೂಷಿಸಿದ್ದಾರೆ. 








