ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ 263 ಕಡೆ ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್: ಆರೋಗ್ಯ ಸಚಿವ ಡಾ.ಕೆ.ಸುಧಾಕರ್..!

Kariyappa N by Kariyappa N
January 7, 2021
in Newsbeat, Politics, Samagra karnataka, ರಾಜ್ಯ
vaccine
Share on FacebookShare on TwitterShare on WhatsappShare on Telegram

                          ಹಕ್ಕಿಜ್ವರದ ಬಗ್ಗೆ ಭಯ ಬೇಡ, ಎಚ್ಚರವಿರಲಿ
ಬೆಂಗಳೂರು: ನಾಳೆ ರಾಜ್ಯದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು(ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ ಎಂದರು.

sudhakar
ನಾಳೆ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ತಿಳಿಸಿದರು.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

vaccine
ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜುಗಳನ್ನು ಕಳುಹಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮಥ್ರ್ಯದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಸುಧಾಕಾರ್ ಮಾಹಿತಿ ನೀಡಿದರು.
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಕೂಡ ನೋಂದಣಿ ಮಾಡಿಸುವುದಾದರೆ ಬರಬಹುದು. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯ ಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ತಿಳಿಸಿದರು.

ಲಸಿಕೆಯಿಂದ ಯಾವುದೇ ಅಪಾಯವಿಲ್ಲ
ಕೊರೊನಾ ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಇದರಿಂದಾಗಿ ಜನರಿಗೆ ಅನುಕೂಲವಾಗುತ್ತದೆ. ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಜನವರಿ 17 ರಂದು ಪೊಲಿಯೋ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ. ಒಟ್ಟು 65 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ 6 ಕಾಗೆಗಳು ಸಾವನ್ನಪ್ಪಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ. ಹಕ್ಕಿಜ್ವರ ಬಾರದಂತೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಕ್ಕಿ ಜ್ವರದ ಬಗ್ಗೆ ಭಯ ಬೇಡ, ಆದರೆ ಎಚ್ಚರದಿಂದ ಇರಬೇಕು ಎಂದು ತಿಳಿಸಿರುವ ಆರೋಗ್ಯ ಸಚಿವರು, ಲಕ್ಷಾಂತರ ಮಕ್ಕಳು ಶಾಲೆಗೆ ಹೋಗುತ್ತಿರುವ ಸಮಯದಲ್ಲಿ ಕೊರೊನಾ ಬಗ್ಗೆ ವಿನಾಕಾರಣ ಭೀತಿ ಮೂಡಿಸಬಾರದು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದೆ ಎಂದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Corona vaccineDr. K Sudhakarhealth ministerkarnatakaVaccine Dry Run
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram