ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬದಲಾವಣೆ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವ ಜೆ.ಇ.ಇ ಪರೀಕ್ಷೆ ಮತ್ತು ಕರ್ನಾಟಕ ಪರೀಕ್ಷಾ ಮಂಡಳಿಯ ವೇಳಾ ಪಟ್ಟಿ ಒಂದೇ ಸಮಯದಲ್ಲಿ ಬಿಡುಗಡೆಯಾಗಿರುವುದರಂದ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕವನ್ನ ಬದಲಾಗಿಸಲಾಗಿದೆ. ಏಪ್ರಿಲ್ 22 ರಿಂದ ಮೇ 11 ರವರೆಗೆ ನಡೆಸಲು ಪರೀಕ್ಷಾ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16ರಿಂದ ಮೇ 06 ರವರೆಗೆ ನಡೆಸಲು ತೀರ್ಮಾನಿಸಿ ವೇಳಾ ಪಟ್ಟಿಯಯನ್ನ ಪ್ರಕಟಿಸಿತ್ತು. ಆದರೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜೆ,ಇ,ಇ ಪರೀಕ್ಷೆಗೆ ತೊಂದರೆಯಾಗದಂತೆ ದ್ವಿತೀಯ ಪಿಯುಸಿ ಪರೀಕ್ಷೆಯ ದಿನಾಂಕವನ್ನ ಪರಿಷ್ಕರಿಸಿದ ತಾತ್ಕಾಲಿಕ ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದು, ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಮತ್ತು ಎನ್‌ಟಿಎ ನಡೆಸುವ ಜೆಇಇ ಪರೀಕ್ಷೆಯ ಕೆಲ ಪತ್ರಿಕೆಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ (ತಾತ್ಕಾಲಿಕ) ಪರಿಷ್ಕರಿಸಲಾಗಿದೆ. ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಾ.5ರ ಸಂಜೆ 5ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೊಸ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.
ವಿದ್ಯಾರ್ಥಿಗಳು/ಪೋಷಕರುಗಳಿಂದ ಪರೀಕ್ಷೆಯ ಬಗ್ಗೆ ಯಾವುದಾದರೂ ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರ ಸಂಜೆ 5:00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ವಿಳಾಸಕ್ಕೆ ಮಾತ್ರ ಕಳುಹಿಸಲು ತಿಳಿಸಿದೆ.
ತಾತ್ಕಾಲಿಕ ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ:
22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
23-4-2022- ಹಿಂದಿ
25-4-2022- ಅರ್ಥಶಾಸ್ತ್ರ
26-4-2022- ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
27-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28-4-2022-ಅರೇಬಿಕ್, ಕನ್ನಡ
30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022- ಇಂಗ್ಲಿಷ್
5-5-2022- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
6-5-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
7-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ,ಐಚ್ಛಿಕ ಕನ್ನಡ
9-5-2022- ಇತಿಹಾಸ, ಭೌತಶಾಸ್ತ್ರ
10-5-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ








