ನಾಳೆ ದ್ವಿತೀಯ ಪಿಯುಸಿ ಫಲಿತಾಂಶ PUC
ಬೆಂಗಳೂರು : ಈಗಾಗಲೇ ಬಂದಿದ್ದ ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಗೊಳಿಸುತ್ತಾರೆ. ವಿದ್ಯಾರ್ಥಿಗಳು www.karresults.nic.in ಲಿಂಕ್ ಮೂಲಕ ಫಲಿತಾಂಶವನ್ನು ನೋಡಬಹುದು.
ನಾಳೆ ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಇದರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 593 ಪ್ರೆಶರ್ಸ್ ವಿದ್ಯಾರ್ಥಿಗಳಿದ್ದಾರೆ.
ಆಗಸ್ಟ್- ಸೆಪ್ಟೆಂಬರ್ ನಲ್ಲಿ ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.









