New Delhi : ನೂತನ ಸಚಿವರಿಗೆ ಖಾತೆ ಹಂಚಿಕೆ ಆಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಸಚಿವ ಬಿ ಶ್ರೀರಾಮುಲು ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಸಚಿವ ಶ್ರೀ ರಾಮುಲು ಮೊದಲಿನಿಂದಲೂ ಡಿಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನೂ ತಮಗೆ ವಹಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಆದ್ರೆ ರಾಮುಲು ಅವರ ಈ ಯಾವ ಬೇಡಿಕೆಗಳೂ ಈಡೇರಲಿಲ್ಲ. ಇದರಿಂದ ರಾಮುಲು ಅವರು ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಗಿರಗಿಟ್ಟಲೇ ಹೊಡೆಯುತ್ತಿದ್ದವು. ಈ ನಡುವೆ ಅವರು ಅಮಿತ್ ಶಾರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜಕೀಯ ಭೇಟಿಯಲ್ಲ ಎಂದ ರಾಮುಲು
ಅಮಿತ್ ಶಾ ಅವರನ್ನು ಭೇಟಿಯಾದ ಚಿತ್ರಗಳನ್ನು ಶ್ರೀರಾಮುಲು ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ.
ಅಲ್ಲದೇ ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಶಾ ಭೇಟಿ ಬಗ್ಗೆ ಮಾತನಾಡಿದ ಬಿ. ಶ್ರೀರಾಮುಲು, “ಅಮಿತ್ ಶಾ ಜೊತೆಗೆ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿಲ್ಲ. ಉಪ ಮುಖ್ಯಮಂತ್ರಿ ಸ್ಥಾನವನ್ನು ಕೇಳಿಲ್ಲ. ಪುತ್ರಿಯ ವಿವಾಹಕ್ಕೆ ಆಹ್ವಾನ ನೀಡಲು ಭೇಟಿ ಮಾಡಿದ್ದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ – https://saakshatv.com/oh-god-sorry-for…cket-lady-prayer/








