ಮೇ.10 ರಿಂದ ಮೇ.24ರವರೆಗೆ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ
ಬೆಂಗಳೂರು : ಕೊರೊನಾಗೆ ಕಡಿವಾಣ ಹಾಕಲು ರಾಜ್ಯದಾದ್ಯಂತ ಮೇ 10 ರಿಂದ ಮೇ 24 ರ ಬೆಳಿಗ್ಗೆಯವರೆಗೆ ಲಾಕ್ ಡೌನ್ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಬೆಂಗಳೂರಿನಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೊರೊನಾ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿರುತ್ತಾರೆ.
ಅದರಂತೆ ಮೇ.10 ರಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು ನಗರದಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ 1973ರ ಸಿಆರ್ ಪಿಸಿ ಅಡಿಯ 144(1) ಅಡಿಯಲ್ಲಿ ಕಪ್ರ್ಯೂ ಜಾರಿಗೊಳಿಸಲಾಗಿದೆ
ಈ ನಿಯಮವನ್ನು ಮೀರುವವರ ವಿರುದ್ಧ ಡಿಎಂಎ 2005ರ ಕಾಯ್ದೆಯ 51 ರಿಂದ 60ರ ಅಡಿಯಲ್ಲಿ ಹಾಗೂ ಐಪಿಸಿ 188 ಸೆಕ್ಷನ್, ಕೆಇಡಿಎ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.