ರಾಜ್ಯದ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Saaksha Tv
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ144 ಸೆಕ್ಷನ್ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ, ಭುಗಿಲೆದ್ದು ಕೆಲ ದಿನಗಳು ಕಳೆದಿವೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹು-ಧಾ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಈ ಕುರಿತು ಆದೇಶ ನೀಡಿದ್ದಾರೆ.
ಹಾಗೇ ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ಶಾಲಾ-ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ಚಿಕ್ಕಮಗಳೂರಿನ ಶಾಲಾ- ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 16ರಿಂದ 23ರ ಸಂಜೆ 6 ಗಂಟೆಯವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.









