ಜುಲೈ 26 ರವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಬೆಂಗಳೂರು, ಜೂನ್ 28: ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ಸಂಬಂಧ ಆದೇಶ ಹೊರಡಿಸಿದ್ದು, ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ನಗರದಲ್ಲಿ ಹರಡುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಲಾಕ್ ಡೌನ್ ಸಡಿಲಿಕೆ ನಂತರ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹಾಗೂ ಕ್ವಾರಂಟೈನ್ ಗೆ ಒಳಪಡುತ್ತಿರುವವರ ಪ್ರಮಾಣವೂ ಗಮನಾರ್ಹ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಈಗಾಗಲೇ ರಾಜ್ಯ ಸರ್ಕಾರ ಹೆಚ್ಚುತ್ತಿರುವ ಕೊರೋನಾ ಅಟ್ಟಹಾಸವನ್ನು ನಿಯಂತ್ರಿಸಲು ಭಾನುವಾರದ ಕರ್ಫ್ಯೂವನ್ನು ಮತ್ತೆ ಜಾರಿಗೆ ತರಲು ತೀರ್ಮಾನಿಸಿದೆ