ಇಬ್ಬರು ಉಗ್ರರನ್ನು ಸೆರೆ ಹಿಡಿದ ಭದ್ರತಾ ಪಡೆಗಳು- Saaksha Tv
ಜಮ್ಮು ಕಾಶ್ಮೀರ: ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೈನಾ ಬಟ್ಪೋರಾ ಗ್ರಾಮದಲ್ಲಿ ಉಗ್ರರರು ಅಡಗಿರುವ ಮಾಹಿತಿ ಸಿಕ್ಕ ಕೂಡಲೇ ಭದ್ರತಾ ಪಡೆಗಳು ಇಂದು ಬೆಳಗ್ಗೆ ಅಲ್ಲಿ ಸುತ್ತುವರಿದಿವೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯ ನಿರತವಾಗಿವೆ ಎಂದು ಕಾಶ್ಮೀರ ಪೊಲೀಸ್ ಟ್ವೀಟ್ ಮಾಡಿದೆ.
#Encounter has started at Naina Batpora area of #Pulwama. Police and security forces are on the job. Further details shall follow. @JmuKmrPolice
— Kashmir Zone Police (@KashmirPolice) March 10, 2022
ಕೆಲ ವರದಿಗಳ ಪ್ರಕಾರ, ಭದ್ರತಾ ಪಡೆಗಳ ಶೋಧ ತಂಡವು ಶಂಕಿತ ಪ್ರದೇಶವನ್ನು ತಲುಪುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ನಂತರ ಎನ್‌ಕೌಂಟರ್ ನಡೆಸಲಾಯಿತು. ಎನ್‌ಕೌಂಟರ್ ಸ್ಥಳದಲ್ಲಿ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.








