ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ (Jammu And Kashmir) ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್ ಕೌಂಟರ್ (Encounter) ನಡೆಸಿದ ಭಾರತೀಯ ಭದ್ರತಾ ಪಡೆಗಳು (Indian Army) 3 ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಬುಧವಾರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಉಗ್ರರು ಹಾಗೂ ಗುಲಾಬ್ ಪೊಸ್ಟ್‌ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ.
ಆದರೆ, ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ತಿಳಿದು ಬಂದಿದೆ. ಭಾರತೀಯ ಸೈನ್ಯವು ದೇಶದಲ್ಲಿ ಒಳನುಸುಳಕೋರರ ವಿರುದ್ಧ ಆಪರೇಷನ್ ಕೈಗೊಂಡಿತ್ತು. ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೆರೆಗೆ ಎನ್ ಕೌಂಟರ್ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.








