ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನಕ್ಕೂ ಮುನ್ನವೇ 29 ನಕ್ಸರನ್ನು ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಬಲಿ ಪಡೆದಿದೆ.
ಈ ವೇಲೆ ನಕ್ಸಲ್ ಕಮಾಂಡರ್ ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಇತಿಹಾಸದಲ್ಲಿಯೇ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಹೊಡೆದುರುಳಿಸಿರುವ ಪ್ರಕರಣವಾಗಿದೆ.
ಮಾವೋವಾದಿಗಳ ಭದ್ರಕೋಟೆಯಾಗಿರುವ ಬಸ್ತಾರ್ ಪ್ರದೇಶದಲ್ಲಿ ಇಲ್ಲಿಯವರೆಗೆ ನಡೆದ ಎನ್ ಕೌಂಟರ್ ನಲ್ಲಿ ಬರೋಬ್ಬರಿ 79 ನಕ್ಸಲರು ಸಾವನ್ನಪ್ಪಿದ್ದಾರೆ. ಅಲ್ಲದೇ, ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಎನ್ ಕೌಂಟರ್ ನಲ್ಲಿ ಹತನಾಗಿರುವ ಕಮಾಂಡರ್ ಶಂಕರ್ ರಾವ್ ತಲೆಗೆ 25 ಲ7 ರೂ. ಬಹುಮಾನ ಘೋಷಿಸಲಾಗಿತ್ತು.