ಕಾಶ್ಮೀರ – ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಹಾಜಿದ್ದೀನ್ ಮುಖ್ಯಸ್ಥ ಸೈಫುಲ್ಲಾ ಹತ್ಯೆ encounter Saifullah
ಶ್ರೀನಗರ, ನವೆಂಬರ್ 02: ಶ್ರೀನಗರದ ಹೊರವಲಯದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಹಾಜಿದ್ದೀನ್ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. encounter Saifullah
ಈ ವರ್ಷ ಮೇ ತಿಂಗಳಲ್ಲಿ ರಿಯಾಜ್ ನಾಯ್ಕು ಹತ್ಯೆಯ ನಂತರ ಉಗ್ರವಾದಿ ಸಂಘಟನೆಯ ಅಧಿಪತ್ಯ ವಹಿಸಿದ್ದ ಉಗ್ರ ಸೈಫುಲ್ಲಾ, ಜಮ್ಮು ಮತ್ತು ಕಾಶ್ಮೀರದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಎಂದು ಮಾಹಿತಿಗಳು ತಿಳಿಸಿವೆ.
ಹಿಜ್ಬುಲ್ ಮುಜಾಹಿದ್ದೀನ್ ನ ನಂಬರ್ ಒನ್ ಕಮಾಂಡರ್ ಆಗಿದ್ದ ಡಾ. ಸೈಫುಲ್ಲಾನನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ. ಇದು ಅತ್ಯಂತ ಯಶಸ್ವಿ ಕಾರ್ಯಾಚರಣೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
ಪಾಕಿಸ್ತಾನದ ಬೀದಿ ಬೀದಿಗಳಲ್ಲಿ ಈಗ ಪ್ರಧಾನಿ ಮೋದಿ, ವಿಂಗ್ ಕಮಾಂಡರ್ ಅಭಿನಂದನ್ ಅವರ ಪೋಸ್ಟರ್ !
ಇದು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಎನ್ಕೌಂಟರ್ ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸೈಫುಲ್ಲಾ ದಕ್ಷಿಣ ಕಾಶ್ಮೀರದಿಂದ ಶ್ರೀನಗರಕ್ಕೆ ಬಂದು ಮನೆಯೊಂದರಲ್ಲಿ ಅಡಗಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದರು.
ಭದ್ರತಾ ಪಡೆಗಳು ಉಗ್ರನ ಅಡಗುತಾಣವನ್ನು ಸುತ್ತುವರಿದು, ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಕೊಲ್ಲಲಾಯಿತು. ನಮ್ಮ ಮೂಲದ ಪ್ರಕಾರ, ಆತ ಡಾ ಸೈಫುಲ್ಲಾ ಎಂದು ನಮಗೆ ಶೇಕಡಾ 95 ರಷ್ಟು ಖಚಿತವಾಗಿದೆ. ಆತನ ಮೃತದೇಹವನ್ನು ಹಿಂಪಡೆದಿದ್ದು, ಇಷ್ಟರಲ್ಲೇ ಗುರುತಿಸಲಾಗುತ್ತದೆ ಎಂದು ವಿಜಯ್ ಕುಮಾರ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಾಲವು ಬಲಶಾಲಿಯಾಗಿದೆ ಮತ್ತು ನಗರಕ್ಕೆ ಪ್ರವೇಶಿಸುವ ಯಾವುದೇ ಭಯೋತ್ಪಾದಕರ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗುತ್ತದೆ ಎಂದು ಅವರು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಇತ್ತೀಚಿನ ಸುದ್ದಿಗಳಿಗಾಗಿ, ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿ
https://chat.whatsapp.com/HZ6kIJcdmq8GNeQb9URf9M
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv