ಮಸೀದಿ ಬಳಿ ಇದ್ದ ಭದ್ರತಾ ಪಡೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಸೀದಿ ಬಳಿ ಇದ್ದ ಭದ್ರತಾ ಪಡೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ದೇಶದೆಲ್ಲಡೆ ರಂಜಾನ್ ಹಬ್ಬ ಸಂಭ್ರಮದಿಂದ ಮುಸ್ಲಿಂ ಬಾಂಧವರು ಆಚರಿಸುತ್ತಿದ್ದಾರೆ. ಈ ನಡುವೆ ದಕ್ಷಿಣ ಕಾಶ್ಮೀರದ ಮುಂಜಾನೆ ಈದ್-ಉಲ್-ಫಿತರ್ ಪ್ರಾರ್ಥನೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಕಾಶ್ಮೀರವನ್ನು ಮುಕ್ತಗೊಳಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದ್ದಾರೆ.
ಈ ವೇಳೆ ಮಧ್ಯಪ್ರವೇಶಿಸಿದ ಭದ್ರತಾ ಪಡೆಗಳ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇದೀಗ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಮುಂಜಾಗ್ರತವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನೆ ಬಗ್ಗೆ ಕೆಲವರು ತಪ್ಪು ತಿಳಿದುಕೊಂಡಿದ್ದರು. ಆದರೆ ಇದೊಂದು ಸಣ್ಣ ಘರ್ಷಣೆಯಷ್ಟೇ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.