ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿರಂತವಾಗಿ ತಮ್ಮನ ತಾವು ತೊಡಗಿಸಿಕೊಂಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಅವರ ಕುಟುಂಬಕ್ಕೆ ಕೊರೊನಾ ಕಂಟಕವಾಗಿದೆ. ತಂದೆ, ಪತ್ನಿ, ಮಕ್ಕಳು ಸೇರಿದಂತೆ ಮನೆಗೆಲಸಗಾರನಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಹಾಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಡಾ.ಕೆ.ಸುಧಾಕರ್ ಅವರಿಗೆ ಆಸ್ಪತ್ರೆಯಲ್ಲಿರುವ ಪತ್ನಿ ಮತ್ತು ಮಗಳಿಂದ ಸಂದೇಶವೊಂದು ಬಂದಿದೆ.
ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಜನ್ಮದಿನವಾಗಿದೆ. ಹಾಗಾಗಿ ನಿನ್ನೆ ರಾತ್ರಿಯೇ ಆಸ್ಪತ್ರೆಯಲ್ಲಿರುವ ಅವರ ಪತ್ನಿ ಮತ್ತು ಮಗಳು ವಿಡೀಯೋ ಸಂದೇಶದ ಮೂಲಕ ಸುಧಾಕರ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್ , ಆಸ್ಪತ್ರೆಯಿಂದ ರಾತ್ರಿ 12 ಗಂಟೆಗೆ ನನ್ನ ಮಗಳು ಮತ್ತು ನನ್ನ ಪತ್ನಿ ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನ ತಿಳಿಸಿದ್ದಾರೆ. ಈ ವಿಡಿಯೋ ಉಡುಗೊರೆ ನನ್ನ ಜೀವನದಲ್ಲೇ ಮದುರವಾದದ್ದು, ಪವಿತ್ರಪ್ರೀತಿಯ ಸಂಕೇತ. ಮಿಸ್ ಯು ಮೈ ಏಂಜಲ್ಸ್ ಎಂದು ಹೇಳಿದ್ದಾರೆ.








