ಪಾದರಾಯನಪುರದ ಘಟನೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ, ರಾಜದ್ರೋಹದ ಕೇಸನ್ನು ದಾಖಲಿಸಿ, ಜೈಲಿಗಟ್ಟುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದರು.
ಈ ಬಗ್ಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ,ಕೊರೊನಾ ವೈರಸ್ ಗೆ ಯಾವುದೇ ಜಾತಿ, ಧರ್ಮ ಎಂಬ ಭೇದ ಭಾವವಿಲ್ಲ. ಇದಕ್ಕೆ ಸಂಯಮ, ಸಂಕಲ್ಪ ಒಂದೆ ದಾರಿ. ಹಾಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಯಮ, ಸಂಕಲ್ಪ ಮಾಡಬೇಕು ಎಂದು ಹೇಳಿದ್ದರು. ಆದರೂ ಸಹ ಕೆಲವು ಕಡೆ ತಪಾಸಣೆಗೆ ಹೋದ ಆಶಾ ಕಾರ್ಯಕರ್ತೆಯರ, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಜೊತೆಗೆ ಪಾದರಾಯನಪುರದಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲೆ ಕೇಸ್ ದಾಖಲಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.