ಸೆಮಿ ಕಂಡಕ್ಟರ್ ಪ್ಲಾಂಟ್ ನಿರ್ಮಾಣ – ಒಡಬಂಡಿಕೆಗೆ ರಾಜ್ಯ ಸರ್ಕಾರ ಮತ್ತು ISMC ಅನಲಾಗ್ ಫ್ಯಾಬ್ ಪ್ರೈ.ಲಿ. ಸಹಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮುಖದಲ್ಲಿ ಸೆಮಿ ಕಂಡಕ್ಟರ್ ಪ್ಲಾಂಟ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು I C M C ಅನಾಲಾಗ್ ಫ್ಯಾಬ್ ಪ್ರೈವೆಟ್ ಲಿಮಿಟೆಡ್ ಕಂಪನಿ ಜೊತೆ ಇಂದು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.
ಸರ್ಕಾರದ ಪರವಾಗಿ ಕೈಗಾರಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅನ್ ಲಾಗ್ ಕಂಪನಿ ಪರವಾಗಿ ನಿರ್ದೇಶಕ ಅಜಯ್ ಜಲನ್ ಸಹಿ ಹಾಕಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಈ ಸೆಮಿ ಕಂಡಕ್ಟರ್ ಕಂಪನಿ ರಾಜ್ಯದಲ್ಲಿ ಸ್ಥಾಪನೆಯಾಗುವುದರಿಂದ ಮುಂದಿನ 7 ವರ್ಷಗಳಲ್ಲಿ 22 ಸಾವಿರದ 900 ಕೋಟಿ ರೂಪಾಯಿ ಹೂಡಿಕೆ ಹಾಗೂ 1500 ಉದ್ಯೋಗ ಒದಗಿಸಲಿದೆ.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಐ.ಎಸ್.ಎಂ.ಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ ಎಂದು ತಿಳಿಸಿದರು.








