ಹಿರಿಯ ನಟ ಅಶ್ವತ್ಥ ನಾರಾಯಣ ನಿಧನ Saaksha Tv
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಅಶ್ವತ್ಥ ನಾರಾಯಣ ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಮೃತಪಟ್ಟಿದ್ದಾರೆ.
ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅಶ್ವತ್ಥ ನಾರಾಯಣ ಅವರು ಭಾನುವಾರ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ಧಾರೆ. ಅಶ್ವತ್ಥ ನಾರಾಯಣ ಅವರು ವರನಟ ಡಾ.ರಾಜ್ ಕುಟುಂಬದ ನಾಲ್ಕು ತಲೆಮಾರುಗಳೊಂದಿಗೆ ನಟಿಸುವ ಮೂಲಕ ವಿಶಿಷ್ಟ ದಾಖಲೆ ಹೊಂದಿದ್ದಾರೆ.
ಡಾ.ರಾಜ್ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಅವರೊಂದಿಗೆ ನಾಟಕಗಳಲ್ಲಿ ಅಶ್ವತ್ಥ ನಾರಾಯಣ ಅವರು ಬಾಲನಟನಾಗಿ ಅಭಿನಯಿಸಿದ್ದರು. ಮುಂದೆ ಡಾ.ರಾಜ್ ಅಭಿನಯದ ಹಲವಾರು ಚಿತ್ರಗಳಲ್ಲಿ ನಟಿಸುತ್ತಾ ಬಂದ ಅವರು ರಾಜ್ ರ ಮೂವರು ಪುತ್ರರ ಚಿತ್ರಗಳಲ್ಲೂ ನಟಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ಅಭಿನಯದ ‘ಸಿದ್ದಾರ್ಥ’ ಚಿತ್ರದಲ್ಲಿ ಅವರು ನಟಿಸಿದ್ದರು. ಈ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ.
ಅಂದಹಾಗೇ, ಕಳೆದ ಕೆಲ ದಿನಗಳ ಹಿಂದಷ್ಟೇ, ನನ್ನ ಕುಟುಂಬಸ್ಥರು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ನಟ ಅಶ್ವಥ್ ನಾರಾಯಣ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ತಮ್ಮ ಎರಡನೇ ಪುತ್ರಿಯ ಜೊತೆಗೆ ಬಸವೇಶ್ವರ ನಗರ ಠಾಣೆಗೆ ತೆರಳಿದಂತ ಹಿರಿಯ ನಟ ಅಶ್ವಥ್ ನಾರಾಯಣ್ ಅವರು, ನನ್ನಗೆ ಬಂದ ಹಣವನ್ನು ಕೊಟ್ಟಿಲ್ಲ. ಕೇಳಿದರೆ ಹಲ್ಲೆ ಮಾಡುತ್ತಾ ಇದ್ದಾರೆ. ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬುದಾಗಿ ದೂರು ನೀಡಿದ್ದರು.