ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ Saaksha Tv
ಸಿನಿಮಾ: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
82 ವರ್ಷದ ಹಿರಿಯ ನಟ ರಾಜೇಶ್ ಅವರು ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ರಾಜೇಶ್ ಜನಿಸಿದ್ದು ಬೆಂಗಳೂರಿನಲ್ಲಿ. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ನಂತರ 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಚಿತ್ರರಂಗದಲ್ಲಿ ‘ಕಲಾತಪಸ್ವಿ’ ರಾಜೇಶ್ ಎಂದೇ ಅವರು ಫೇಮಸ್ ಆದರು. ಅವರು 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು
ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಗುಣಮುಖರಾಗಲಿ ಎಂದು ಆಪ್ತರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.