ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಯಂತಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು ವರದಿ ನೆಗೆಟಿವ್ ಬಂದಿದೆ. ಜಯಂತಿ ಅವರು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೆಲವು ಸಮಯದ ಹಿಂದೆ ಕೂಡ ಅವರಿಗೆ ಅಸ್ತಮಾ ಉಲ್ಬಣ ಗೊಂಡು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಆಗಲೂ ಸಹ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿದ್ದು ಬಳಿಕ ಅವರು ಚೇತರಿಸಿಕೊಂಡಿದ್ದರು.