ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರ ಹಿರಿಯ ಸಹೋದರಿ ಇಹಲೋಕ ತ್ಯಜಿಸಿದ್ದಾರೆ.
ರಾಜೇಶ್ವರಿಬೆನ್ ಶಾ (Rajeshwariben Shah) ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮುಂಬಯಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಸಹೋದರಿಯ ರಾಜೇಶ್ವರಿಬೆನ್ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಅಹಮದಾಬಾದ್ನಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು. ನಂತರ ಥಾಲ್ತೇಜ್ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನಡೆದಿದೆ.