ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಜನವರಿ 26, 2025) ದಕ್ಷಿಣ ಕನ್ನಡ ಜಿಲ್ಲೆಯ ಬಾಳೆಪುಣಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಗುರುವಪ್ಪ ಬಾಳೆಪುಣಿ ಅವರು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಪ್ರಮುಖ ಸಾಧನೆಗಳಲ್ಲಿ ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿಯೂ ಸೇರಿದೆ.
ಅವರ ಸೇವೆಯನ್ನು ರಾಜ್ಯ ಸರ್ಕಾರವು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯ ಮೂಲಕ ಗೌರವಿಸಿದೆ. ಅಲ್ಲದೆ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಅವರ ಅಗಲಿಕೆಯಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ.








