ಕನ್ನಡದ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇನ್ನಿಲ್ಲ Saaksha Tv
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಇಂದು ಬೆಳಗಿನ ಜಾವ 5 ಗಂಟೆ ನಿಧನರಾಗಿದ್ದಾರೆ.
ಅವರಿಗೆ 75 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಇಂದು ಮುಂಜಾನೆ 5ರ ಸುಮಾರಿಗೆ ಅವರು ನಿಧನ ಹೊಂದಿದ್ದಾರೆ. ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರು ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಸ್ಯಾಂಡಲ್ವುಡ್ನಲ್ಲಿ ಸೇವೆ ಸಲ್ಲಿಸಿದ್ದರು. ವೈಶಾಖದ ದಿನಗಳು ಹಾಗೂ ಅರಿವು ಅವರಿಗೆ ಖ್ಯಾತಿ ತಂದುಕೊಟ್ಟ ಚಿತ್ರಗಳು. ನಟನೆಯಲ್ಲೂ ತೊಡಗಿಸಿಕೊಂಡಿದ್ದ ಅವರು, ಮನೆ ಮನೆ ಕಥೆಯಲ್ಲಿ ಕಾಣಿಸಿಕೊಂಡು ಜನಪ್ರೀಯರಾಗಿದ್ದರು. ಅಲ್ಲದೇ ಇವರು ಸಾಹಸ ಸಿಂಹ ವಿಷ್ಣು ವರ್ಧನ್ ಅವರಿಗೆ ಕಟ್ಟೆ ರಾಮಚಂದ್ರ ಆಪ್ತರಾಗಿದ್ದರು.