ಮಂಗಳೂರು: ಜಿಲ್ಲೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20 ಜನ ಗಾಯಗೊಂಡಿದ್ದಾರೆ.
ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಈ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆ ತೆರಳಿ, ಮರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.








