ನವದೆಹಲಿ: ಕಾರು, ಟ್ಯಾಂಕರ್ ಹಾಗೂ ವ್ಯಾನ್ ಮಧ್ಯೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜೈಪುರದಿಂದ ತೆರಳುತ್ತಿದ್ದ ತೈಲ ಟ್ಯಾಂಕರ್ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಹಾಗೂ ವ್ಯಾನ್ ಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸಿಎನ್ಜಿ ಸಿಲಿಂಡರ್ ಸ್ಫೋಟವಾಗಿದ್ದು, ಬೆಂಕಿ ಹೊತ್ತಿಕೊಂಡು ಕಾರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ವ್ಯಾನ್ ಗೆ ಕೂಡ ಟ್ಯಾಂಕರ್ ಡಿಕ್ಕಿಯಾಗಿದ್ದರಿಂದಾಗಿ ಅದರ ಚಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಕಾರಿನಲ್ಲಿದ್ದವರು ಜೈಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಟ್ಯಾಂಕರ್ ಚಾಲಕನನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು (Police) ಹೇಳಿದ್ದಾರೆ.