ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumakuru-Bengaluru National Highway) ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನೆಲಮಂಗಲ (Nelamangala) ತಾಲೂಕಿನ ಕುಲುವನಹಳ್ಳಿ ಹತ್ತಿರ ಅಪಘಾ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಬಲಿಯಾಗಿದ್ದಾರೆ. ಅಲ್ಲದೇ, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ, ಟೆಂಪೋ, ಕಾಂಕ್ರಿಟ್ ಮಿಕ್ಸರ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಕೆಲಸ ಮಾಡುವ ಮೂವರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸುತ್ತಿದ್ದಾರೆ.