ಚಿಕ್ಕೋಡಿ: ಸರಣಿ ಅಪಘಾತವೊಂದು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿ, 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ತಾಲೂಕಿನ ಸ್ಥವನಿಧಿ ಘಾಟ್ ಹತ್ತಿರ ನಡೆದಿದೆ. ಕಂಟೇನರ್ ವೊಂದು ಮೂರು ಕಾರು, ಎರಡು ಲಾರಿ, ಮತ್ತೊಂದು ಕಂಟೇನರ್ ಹಾಗೂ ಬೈಕ್ ಗೆ ಗುದ್ದಿದ ಪರಿಣಾಮ ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಂಟೇನರ್ ವಾಹನದ ಚಾಲಕನ ನಿರ್ಲಕ್ಷದಿಂದಾಗಿ ಈ ಘಟನೆ ಸಂಭವಿಸಿದೆ. ಅಲ್ಲದೇ, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.