ರಾಯಚೂರು: ಖದೀಮರು ಸರಣಿ ಕಳ್ಳತನ ಮಾಡಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ (Sindhanur) ನಡೆದಿದ್ದು, ಒಂದೇ ದಿನ ಮೂರು ಕಡೆ ಕಳ್ಳತನವಾಗಿದೆ. ನಗರದ ಬಸ್ ನಿಲ್ದಾಣದ ಹತ್ತಿರ ಸಲೀಂ ಎಂಬ ವ್ಯಕ್ತಿಯ ಮೊಬೈಲ್ ಅಂಗಡಿಯ ಬೀಗ ಒಡೆದು ಸುಮಾರು 5 ಲಕ್ಷ ರೂ. ಮೌಲ್ಯದ 60 ಮೊಬೈಲ್ ಕಳ್ಳತನ ಮಾಡಲಾಗಿದೆ. ಮೊಬೈಲ್ ಸೇರಿದಂತೆ ಕೆಲವು ರಿಪೇರಿಗೆ ಬಂದಿದ್ದ ಮೊಬೈಲ್‍ಗಳು ಎನ್ನಲಾಗಿದೆ.
ಇಬ್ಬರು ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳತನದ ವೇಳೆ ಸಿಸಿ ಕ್ಯಾಮೆರಾಗಳನ್ನು ಬೇರೆಡೆಗೆ ತಿರುಗಿಸಿದ್ದಾರೆ. ಮನೆ ಒಂದರ ಕೆಳಗೆ ನಿಲ್ಲಿಸಿದ್ದ ಒಂದು ಬೈಕ್ ಹಾಗೂ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮನೆಗೆ ನುಗ್ಗಿ ಒಂದು ಲ್ಯಾಪ್‍ಟಾಪ್ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.