ಸರಣಿ ಅಫಘಾತ – ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿ ಆಟೋ ನಜ್ಜುಗುಜ್ಜು…
ಬೆಂಗಳೂರು – ಬ್ಯಾಟರಾಯನಪುರ ಬಳಿಯ ಮೈಸೂರು ರಸ್ತೆಯಲ್ಲಿ ಸರಣಿ cಸಂಭವಿಸಿದ್ದು, ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ.
ಸರಣಿ ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರು ಆಟೋ ಚಾಲಕನ ರಕ್ಷಣೆಗೆ ಹರಸಾಹಸ ಪಟ್ಟಿದ್ದಾರೆ. ಅರ್ಧಗಂಟೆಗಳ ಕಾಲ ಹರಸಾಹಸದ ಬಳಿಕ ಆಟೋ ಚಾಲಕನನ್ನು ಹೊರತೆಗೆಯಲಾಗಿದೆ.
ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದಾಗಿ ಮೈಸೂರು ರೋಡ್ ಕೆಲಕಾಲ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ನಿಂದಾಗಿ ಜನರು ಹೈರಾಣಾಗಿದ್ದಾರೆ.
ಪೊಲೀಸರು ಅಪಘಾತಕ್ಕೆ ಒಳಗಾದ ನಾಲ್ಕು ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.