ಬೆಂಗಳೂರು: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Department of Women and Child Welfare) 600 ಕೋಟಿ ರೂ.ಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ (Nutritious Food) ವಿತರಣೆಯಲ್ಲಿ ಅವ್ಯವಹಾರ ನಡೆದಿದೆ. ಅನರ್ಹಗೊಂಡಿರುವ ಸಹಕಾರ ಸಂಸ್ಥೆಗಳಿಂದ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡುವ ಟೆಂಡರ್ ನೀಡಿದ್ದಾರೆ. ಬ್ಲಾಕ್ ಲೀಸ್ಟ್ ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಇಲಾಖೆ ಅಧಿಕಾರಿಗಳು ಶಾಮೀಲಾಗಿ ಟೆಂಡರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಥಳೀಯ ಸೇವಾ ಸಂಘಸಂಸ್ಥೆಗಳಿಂದಲೇ ಆಹಾರ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸಚಿವರು ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಾರೆ. ಬ್ಲಾಕ್ ಲಿಸ್ಟ್‌ನಲ್ಲಿನ ಕಂಪನಿಗೆ ಆಹಾರ ಪೂರೈಕೆ ಮಾಡಲು ಟೆಂಡರ್ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.