ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುಣಚ ಗ್ರಾಮದ ನಿವಾಸಿ ಮನೋಹರ್ ಬಂಧಿತ ಆರೋಪಿಯಾಗಿದ್ದಾನೆ. ಈತ ಅದೇ ಗ್ರಾಮದ 7ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಕಳೆದ ಒಂದು ವರ್ಷದಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಫೆಬ್ರವರಿ 02ರಂದು ಬಾಲಕಿಯು ಪರಿಯಾಲ್ತಡ್ಕ ಪೇಟೆಗೆ ಹೋಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಪಾಸ್ ಬರುತ್ತಿದ್ದ ವೇಳೆ ಪುಣಚ ಗ್ರಾಮದ ತೋರಣಕಟ್ಟೆ ಎಂಬಲ್ಲಿ ಒಬ್ಬಳೇ ನಿಂತಿರುವಾಗ ಆರೋಪಿ ಬೈಕ್ ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಠಾಣೆಗೆ ದೂರು ನೀಡಲಾಗಿದೆ.
ಅದರಂತೆ ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.