ನಟಿ ಮೇಲೆ ದೌರ್ಜನ್ಯ – ನಟ ದಿಲೀಪ್ ಕುಮಾರ್ ಅರ್ಜಿ ವಜಾಗೊಳಿಸಿದ ಕೋರ್ಟ್
2017ರ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮುಂದಿನ ತನಿಖೆಯನ್ನು ವಿರೋಧಿಸಿ ನಟ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಮುಂದಿನ ತಿಂಗಳ 15 ರೊಳಗೆ ತನಿಖೆ ಪೂರ್ಣಗೊಳಿಸುವಂತೆ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರು ತನಿಖಾ ಸಂಸ್ಥೆಗೆ ಸೂಚಿಸಿದ್ದಾರೆ.
ಅಂತಿಮ ಹಂತಕ್ಕೆ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸಲು ಮಾತ್ರ ಇದು ಸಹಾಯ ಮಾಡುತ್ತದೆ ಎಂದು ಕೋರ್ಟ್ ಹೇಳಿದೆ. ನಟ ದಿಲೀಪ್ ಮುಂದಿನ ತನಿಖೆ ನಡೆಸುವ ಕ್ರಮವನ್ನು ವಿರೋಧಿಸಿದರು.
ಒಂದು ಕಾಲದಲ್ಲಿ ನಟನಿಗೆ ಆಪ್ತವಾಗಿದ್ದ ಚಲನಚಿತ್ರ ನಿರ್ದೇಶಕ ಬಾಲಚಂದ್ರ ಕುಮಾರ್ ಈ ಕೇಸ್ ನಲ್ಲಿ ಸಿಕ್ಕಿಬಿದ್ದ ಬಳಿಕ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ರಾಜ್ಯ ಅಪರಾಧ ವಿಭಾಗವು ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯವನ್ನು ಕೇಳಿದೆ.








