ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಯೊಂದು ವರದಿಯಾಗಿದೆ.
ಜಯನಗರ ಠಾಣಾ ವ್ಯಾಪ್ತಿಯಲ್ಲಿ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಪೊಲೀಸರು ಶರವಣ (22) ಅನ್ನು ಬಂಧಿಸಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಗಳು ಸಮೀಪದ ಅಂಗಡಿಗೆ ತೆರಳಿದ್ದ ಸಂದರ್ಭದಲ್ಲಿ ಆರೋಪಿ ಬಾಯಿ ಗಟ್ಟಿಯಾಗಿ ಮುಚ್ಚಿ ಕರೆದುಕೊಂಡು ಹೋದನು. ಕಿರಿದಾದ ರಸ್ತೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಕಂಡ ಅಂಗಡಿಯವರೊಬ್ಬರು ಬಾಲಕಿಯ ತಂದೆಗೆ ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಕುರಿತು ಆರೋಪಿ ವಿಚಾರಿಸಲು ಹೋಗಿದ್ದಾಗ, ಆತನ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.