ಸ್ವೀಟ್ ಶಾಪ್ ನಲ್ಲಿ ಕೆಲಸ ಮಾಡ್ತಿದ್ದ ಇಂಜಿನಿಯರ್ ವಿದ್ಯಾರ್ಥಿನಿ ಮೇಲೆ ಮಾಲೀಕನಿಂದ ಅತ್ಯಾಚಾರ
ಆಂಧ್ರಪ್ರದೇಶ: ಸ್ವೀಟ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅಂಗಡಿಯ ಮಾಲೀಕ ಅತ್ಯಾಚಾರವೆಸಗಿರುವ ಘಟನೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಪೊನ್ನೂರಿನಲ್ಲಿ ನಡೆದಿದೆ.
ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ ಮಿಶ್ರಿಣ ಮಾಡಿ ಯುವತಿಗೆ ನೀಡಿ ಬಳಿಕ ಅತ್ಯಾಚಾರ ಮಾಡಲಾಗಿದೆ. ಈ ಸಂಬಂಧ ಸಂತ್ರಸ್ತೆಯ ಪಾಲಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಸಂತ್ರಸ್ತೆ ಗುಂಟೂರು ಜಿಲ್ಲೆಯಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದಳು. ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕಾಲೇಜು ಮುಚ್ಚಿರುವುದುರಿಂದ ತಿಂಗಳಿಗೆ 5000 ರೂ. ಸಂಬಳಕ್ಕಾಗಿ ಸ್ವೀಟ್ ಶಾಪ್ ನಲ್ಲಿ ಕೆಲಸಕ್ಕೆ ಸೇರಿದ್ದಳು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.