ತುಮಕೂರು: ಮಹಿಳಾ ಪೊಲೀಸ್ ಪಿಎಸ್ ಐ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಯೊಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತವರು ಜಿಲ್ಲೆಯಲ್ಲಿ ನಡೆದಿದೆ.
ಈಗ ಪೊಲೀಸರಿಗೆ ರಕ್ಷಣೆ ಕೊಡುವ ಕಾಲ ಬಂದಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮಹಿಳಾ ಪಿಎಸ್ ಐ ಮೇಲೆಯೇ ಲೈಂಗಿಕ ಕಿರುಕುಳ ನೀಡಿ ಪ್ರಕರಣ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ನಾಗರಕಟ್ಟೆಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಡಿಜೆ ವಾಹನದ ಹತ್ತಿರ ಮಹಿಳಾ ಪಿಎಸ್ಐ ಭದ್ರತಾ ಕರ್ತವ್ಯದಲ್ಲಿದ್ದರು. ಆ ಮೆರವಣಿಗೆಯು ಎಂಜಿ ರಸ್ತೆಯ ಮಹದೇವ ಸ್ಟೇಷನರಿ ಅಂಗಡಿ ಹತ್ತಿರ ತಲುಪುತ್ತಿದ್ದಂತೆ ಪಿಎಸ್ಐಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತಪುರದ ದರ್ಶನ್ ಎಂಬ ವ್ಯಕ್ತಿಯ ವಿರುದ್ಧ ಆರೋಪ ಕೇಳಿ ಬಂದಿದ್ದು, ಘಟನೆ ಕುರಿತು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.