ಬೆಂಗಳೂರು: ವಕೀಲೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ದ ಆರೋಪ ಕೇಳಿ ಬಂದಿದೆ.
ನಗರದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ (IT Officer) ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ಐಟಿ ಅಧಿಕಾರಿ ವರುಣ್ ಮಲ್ಲಿಕ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ ನೀಡಿದ್ದಾರೆ. ಈ ಕುರಿತು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








