ಲೈಂಗಿಕ ದೌರ್ಜನ್ಯ | ವಿದ್ಯಾರ್ಥಿನಿ ಆತ್ಮಹತ್ಯೆ.. ಶಿಕ್ಷಕ ಬಂಧನ Sexual Assault saaksha tv
ಚೆನ್ನೈ : ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ನಡೆದಿದೆ.
ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರಿನ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಅದೇ ಶಾಲೆಯಲ್ಲಿ 12ನೇ ತರಗತಿಯಲ್ಲಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಶಿಕ್ಷಕದ ಕಾರ್ಮಕಾಂಡ ಬಯಲಿಗೆ ಬಂದಿದ್ದು, ವಾಟ್ಸಾಪ್ ಚಾಪ್ ಆಧಾರ ಮೇಲೆ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.
ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಬಂಧಿಸಿದ್ದಾರೆ.