ರ್ಯಾಪಿಡೋ (Rapido) ಬೈಕ್ ಸವಾರನೊಬ್ಬ ದಾರಿ ಮಧ್ಯೆ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಠನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ರ್ಯಾಪಿಡೋ ಬುಕ್ ಮಾಡಿದ್ದರು. ಬೈಕ್ (Rapido Bike) ಸವಾರ ಓಟಿಪಿ ಪಡೆಯುವ ನೆಪದಲ್ಲಿ ಮೊಬೈಲ್ ಕಸಿದುಕೊಂಡಿದ್ದಾನೆ. ನಂತರ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಚಲಿಸುತ್ತಿದ್ದ ಬೈಕ್ನಿಂದ ಜಿಗಿದಿದ್ದಾಳೆ.
ನಂತರ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಆಂಧ್ರಪ್ರದೇಶ ಮೂಲದ ದೀಪಕ್ ರಾವ್ ಎಂಬಾತನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.